ಅಬೂಬಕ್ಕರ್ ಬಂಧನ: ಹಲವು ಪ್ರಕರಣ ಬೆಳಕಿಗೆ

Posted on April 1, 2011

0


ಮಂಗಳೂರು: ಕೆಲವು ದಿನಗಳ ಹಿಂದೆ ಬಂಟ್ವಾಳ ಪೊಲೀಸರಿಂದ ಬಂಧನಕ್ಕೊಳಗಾಗಿರುವ ಕುಖ್ಯಾತ ಕಳ್ಳ ಅಬೂಬಕ್ಕರ್ ಹಲವು ಕಳ್ಳತನ ಪ್ರಕರಣಗಳ ಬಗ್ಗೆ ಬಾಯ್ಬಿಟ್ಟಿದ್ದು, ಈತ ಚಿಕ್ಕಮಗಳೂರು ಠಾಣಾ ವ್ಯಾಪ್ತಿಯಲ್ಲಿ ರೌಡಿ ಲಿಸ್ಟ್‌ನಲ್ಲಿ ಸೇರಿ ರುವ ಕುಖ್ಯಾತ ಗೂಂಡಾ ಎಂದು ತನಿಖೆಯ ವೇಳೆ ಬೆಳಕಿಗೆ ಬಂದಿದೆ. ಚಿಕ್ಕಮ ಗಳೂರು ನಿವಾಸಿ ಅಬೂಬಕ್ಕರ್ ರಿಕ್ಷಾ ಚಾಲಕನಾಗಿ ಕೆಲಸ ಮಾಡುತ್ತಿದ್ದು, ದ.ಕ. ಜಿಲ್ಲೆಯ ಬಂಟ್ವಾಳ, ಬೆಳ್ತಂಗಡಿ, ಪುತ್ತೂರಿನ ವಿವಿಧ ಭಾಗಗಳಲ್ಲಿ ಮನೆ ಕಳ್ಳತನ ಪ್ರಕರಣ ಗಳಲ್ಲಿ ಭಾಗಿಯಾಗಿದ್ದ ಎಂದು ತಿಳಿದು ಬಂದಿದೆ. ಈತನಿಂದ ಚಿನ್ನಾಭರಣ ಹಾಗೂ ಕಳವುಗೈದ ಇತರೇ ಸೊತ್ತುಗಳನ್ನು ಪೊಲೀ ಸರು ಇನ್ನಷ್ಟೇ ವಶಪಡಿಸಿಕೊಳ್ಳಬೇಕಿದೆ.

Advertisements
Posted in: Crime News