ಶಾಲಾ, ಕಾಲೇಜುಗಳನ್ನು ಸ್ಥಾಪಿಸಲು ಖಾಸಗಿಯವರಿಗ ೆ ಆದ್ಯತೆ: ಕಾಗೇರಿ

Posted on April 1, 2011

0


ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಹೊಸ ಶಾಲಾ, ಕಾಲೇಜು ಗಳನ್ನು ಸ್ಥಾಪಿಸಲು ಖಾಸಗಿಯವರಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಖಾತೆ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.

ರಾಜ್ಯದಲ್ಲಿ ಹೊಸತಾಗಿ ಒಂದು ಸಾವಿರ ಪ್ರೌಢಶಾಲೆ ಹಾಗೂ ಐನೂರು ಪದವಿ ಪೂರ್ವ ಕಾಲೇಜುಗಳನ್ನು ಸ್ಥಾಪಿಸಬೇಕು ಎಂಬ ಬೇಡಿಕೆ ಕೇಳಿ ಬಂದಿದೆ. ಆದರೆ ಈ ವರ್ಷ ಸರ್ಕಾರ ಹೊಸತಾಗಿ ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳನ್ನು ಪ್ರಾರಂಭಿಸಲು ಸರ್ಕಾರದಿಂದ ಅನು ಮತಿ ದೊರೆತಿಲ್ಲ.

ಈ ಹಿನ್ನೆಲೆಯಲ್ಲಿ ಮೂಲ ಸೌಕರ್ಯಗಳನ್ನು ಹೊಂದಿರುವ ಶಿಕ್ಷಣ ಸಂಸ್ಥೆಗಳಿಗೆ ಅವಕಾಶ ಮಾಡಿಕೊಡ ಲಾಗುತ್ತಿದೆ. ಕಳೆದ ವರ್ಷ ರಾಜ್ಯಾದ್ಯಂತ ೩೦೦ ಹೊಸ ಪ್ರೌಢ ಹಾಗೂ ಪದವಿ ಪೂರ್ವ ಕಾಲೇಜುಗಳನ್ನು ತೆರೆಯಲು ಅನುಮತಿ ನೀಡಲಾಗಿತ್ತು ಎಂದು ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರಿಗೆ ತಿಳಿಸಿದರು.

ಸರ್ಕಾರ ಹೊಸತಾಗಿ ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜು ಗಳನ್ನು ಪ್ರಾರಂಭಿಸುವ ಬದಲು ಈ ಹಿಂದೆ ಪ್ರಾರಂಭಿಸಿದ ಶಾಲಾ, ಕಾಲೇಜು ಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಆದ್ಯತೆ ನೀಡುತ್ತಿದೆ. ಇಂದಿ ನಿಂದ ರಾಜ್ಯಾದ್ಯಂತ ಎಸ್ಸೆಸ್ಸೆಲ್ಸಿ ಪರೀಕ್ಷೆ ಗಳು ಆರಂಭವಾಗಲಿದ್ದು ಏಪ್ರಿಲ್ ಹದಿಮೂರರವರೆಗೆ ನಡೆಯಲಿದೆ ಎಂದ ಅವರು ಒಟ್ಟು ೮,೭೫,೨೫೪ ವಿದ್ಯಾರ್ಥಿ ಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ವಿವರಿಸಿದರು.

ರಾಜ್ಯಾದ್ಯಂತ ೨೯೫೧ ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ ಎಂದ ಅವರು, ಈ ಪೈಕಿ ೪೪೫ ಸೂಕ್ಷ್ಮ, ಅತಿ ಸೂಕ್ಷ್ಮ ಪರೀಕ್ಷಾ ಕೇಂದ್ರಗಳಿವೆ ಎಂದರು. ರಾಜ್ಯಾದ್ಯಂತ ಪಿಯುಸಿ ಪರೀಕ್ಷೆಗಳು ಯಶಸ್ವಿಯಾಗಿ ನಡೆದು ಪೂರ್ಣಗೊಂಡಿದೆ. ವಿದ್ಯಾರ್ಥಿಗಳ ಭವಿಷ್ಯವನ್ನು ನಿರ್ಧರಿಸಲಿರುವ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಏಪ್ರಿಲ್ ಎಂಟರಂದು ಆರಂಭಗೊಂಡು, ಏಪ್ರಿಲ್ ಅಂತ್ಯಕ್ಕೆ ಇಲ್ಲವೆ ಮೇ ಮೊದಲ ವಾರದಲ್ಲಿ ಫಲಿತಾಂಶ ಪ್ರಕಟಗೊಳ್ಳುವ ಸಾಧ್ಯತೆಯನ್ನು ತಳ್ಳಿ ಹಾಕಲಾಗದು.

ಈ ಮಧ್ಯೆ ಶಿಕ್ಷಕರು ವೇತನ ತಾರತಮ್ಯವನ್ನು ಸರಿಪಡಿಸುವಂತೆ ಒತ್ತಾಯಿಸಿ ಮೌಲ್ಯಮಾಪನವನ್ನು ಬಹಿಷ್ಕರಿಸುತ್ತಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಆದರೆ ವಿದ್ಯಾರ್ಥಿಗಳ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಶಿಕ್ಷಕರು ಬಹಿಷ್ಕ್ಕಾರದಂತಹ ಕ್ರಮಕ್ಕೆ ಮುಂದಾಗಬಾರದು ಎಂದು ಮನವಿ ಮಾಡಿದರು.

ಅವರ ವೇತನ ತಾರತಮ್ಯವನ್ನು ಸರಿಪಡಿಸುವ ವಿಷಯದಲ್ಲಿ ನಮಗೂ ಕಾಳಜಿಯಿದೆ. ಕಾರ್ಯದರ್ಶಿಗಳ ನೇತೃತ್ವದ ಸಮಿತಿ ಈ ಬಗ್ಗೆ ಅಧ್ಯಯನ ನಡೆಸಿ ಮುಖ್ಯಮಂತ್ರಿಗಳು ಸದ್ಯದಲ್ಲೇ ರಚಿಸಲಿರುವ ವೇತನ ಸಮಿತಿಗೆ ವರದಿ ನೀಡಲಿದೆ ಎಂದರು.

ರಾಜ್ಯದ ಹಲವು ಖಾಸಗಿ ಶಾಲಾ, ಕಾಲೇಜುಗಳು ವಿದ್ಯಾರ್ಥಿಗಳ ಪೋಷ ಕರಿಂದ ಕಾನೂನು ಬಾಹಿರವಾಗಿ ಡೊನೇಷನ್ ವಸೂಲು ಮಾಡು ತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದ್ದು ಇದನ್ನು ತಡೆಗಟ್ಟಲು ಪರಿ ಣಾಮಕಾರಿ ಕ್ರಮಗಳನ್ನು ಕೈಗೊಳ್ಳಲಾ ಗುವುದು ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು. ಖಾಸಗಿ ಶಾಲೆಗಳ ಇಂತಹ ನಡವಳಿಕೆಗೆ ಪೋಷಕರ ಭಾವನೆಯೂ ಕಾರಣ ಎಂದು ದೂರಿದ ಅವರು, ತಮ್ಮ ಮಕ್ಕಳು ಇಂತಹ ಶಾಲೆಗಳಲ್ಲೇ ಓದಬೇಕು ಎಂದು ಪಟ್ಟು ಹಿಡಿದಾಗ ಇಂತಹ ಸಮಸ್ಯೆಗಳಾಗುತ್ತವೆ. ಬದಲಾಗಿ ಸರ್ಕಾರಿ ಶಾಲೆಗೆ ಮಕ್ಕಳನ್ನು ಸೇರಿಸಿ ದರೆ ಸಮಸ್ಯೆ ದೂರವಾಗಲಿದೆ ಎಂದರು.

Advertisements
Posted in: State News