ಮುಖ್ಯಮಂತ್ರಿಯ ಭೂಹಗರಣ : ಪ್ರಕರಣಗಳಿಗೆ ಕೋರ್ಟ್ ತಡೆಯಾಜ್ಞೆ

Posted on April 2, 2011

0


ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧದ ಭೂ ಹಗರಣಗಳಿಗೆ ಸಂಬಂಧಿಸಿದ ಎಲ್ಲ ಪ್ರಕರಣಗಳಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

ಇದೇ ಸಂದರ್ಭದಲ್ಲಿ ಗೃಹ ಮತ್ತು ಸಾರಿಗೆ ಸಚಿವ ಆರ್.ಅಶೋಕ್ ವಿರುದ್ಧದ ಆಕ್ರಮ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಏಪ್ರಿಲ್ ಐದರ ರವರೆಗೆ ಮಧ್ಯಂತರ ತಡೆಯಾಜ್ಞೆ ನೀಡಿದೆ. ಭೂ ಹಗರಣಕ್ಕೆ ಸಂಬಂಧಿಸಿ ದಂತೆ ಯಡಿಯೂರಪ್ಪ ಮತ್ತು ಕುಟುಂಬದ ವಿರುದ್ಧದ ಉಳಿದ ನಾಲ್ಕು ಪ್ರಕರಣಗಳ ವಿಚಾರಣೆಗೆ ತಡೆ ನೀಡುವಂತೆ ಮುಖ್ಯಮಂತ್ರಿಯವರ ಅಳಿಯ ಸೋಹನ್ ಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿ ಕೊಂಡ ನ್ಯಾಯಮೂರ್ತಿ ಕೆ.ಎನ್. ಕೇಶವ ನಾರಾಯಣ್ ಅವರಿದ್ದ ಹೈ ಕೋರ್ಟ್‌ನ ಏಕ ಸದಸ್ಯಪೀಠ ತಡೆ ಯಾಜ್ಞೆ ನೀಡಿದೆ.

ಈ ಆದೇಶದ ಹಿನ್ನೆಲೆಯಲ್ಲಿ ಯಡಿ ಯೂರಪ್ಪ ಸಂಪೂರ್ಣ ನಿರಾಳರಾಗಿ ದ್ದರೆ, ಪತನದ ಭೀತಿಗೊಳಗಾಗಿದ್ದ ಆರ್. ಅಶೋಕ್ ತಾತ್ಕಾಲಿಕವಾಗಿ ನಿಟ್ಟುಸಿರು ಬಿಡುವಂತಾಗಿದೆ.

ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಪೀಠ, ಧವಳಗಿರಿ ಪ್ರಾಪ ರ್ಟಿಸ್ ಅಂಡ್ ಡವೆಲಪರ‍್ಸ್, ಸಹ್ಯಾದ್ರಿ ಹೆಲ್ತ್‌ಕೇರ್ ಅಂಡ್ ಡಯೋಗ್ನೋಸ್ಟಿಕ್ ಪ್ರೈ.ಲಿ., ಸಂಸ್ಥೆಗಳು ಸೇರಿದಂತೆ ನಡೆಸಿ ರುವ ಅವ್ಯವಹಾರಗಳ ಪ್ರಕರಣಗಳ ತನಿಖೆಗೆ ತಡೆಯಾಜ್ಞೆ ನೀಡಿದೆ. ಈಗಾ ಗಲೇ ಸಿಎಂ ವಿರುದ್ಧದ ಭೂ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಈಗಾಗಲೇ ತಡೆಯಾಜ್ಞೆ ನೀಡಿದೆ.

ಜಸ್ಟೀಸ್ ಫಾರ್ ಲಾಯರ್ ಫೋರಂನ ಸಿರಾಜಿನ್ ಬಾಷಾ ಹಾಗೂ ಬಾಲರಾಜ್ ಅವರು ಭೂ ಹಗರಣದ ಕುರಿತಂತೆ ರಾಜ್ಯಪಾಲರ ಅನುಮತಿ ಯೊಂದಿಗೆ ಐದು ಖಾಸಗಿ ದೂರನ್ನು ಲೋಕಾಯುಕ್ತ ವಿಶೇಷ ಕೋರ್ಟ್‌ಗೆ ಸಲ್ಲಿಸಿದ್ದರು. ದೂರಿನ ವಿಚಾರಣೆ, ಸಾಕ್ಷಿ ಗಳ ಹೇಳಿಕೆ ಪಡೆದ ಲೋಕಾಯುಕ್ತ ಕೋರ್ಟ್, ಪ್ರಕರಣದ ವಿಚಾರಣೆ ನಡೆಸಿ ವರದಿ ಕೊಡುವಂತೆ ಲೋಕಾಯುಕ್ತ ಪೊಲೀಸರಿಗೆ ಆದೇಶ ನೀಡಿತ್ತು.

ಏತನ್ಮಧ್ಯೆ ಲೋಕಾಯುಕ್ತ ಕೋರ್ಟ್ ಆದೇಶ ಪ್ರಶ್ನಿಸಿ ಕೆಲವು ದಿನಗಳ ಹಿಂದಷ್ಟೇ ಮುಖ್ಯಮಂತ್ರಿ ಅವರ ಅಳಿಯ ಸೋಹನ್ ಕುಮಾರ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಮೊದಲ ಪ್ರಕರಣಕ್ಕೆ ಹೈಕೋರ್ಟ್ ತಡೆ ನೀಡಿದ ಬೆನ್ನಲ್ಲೇ, ಉಳಿದ ನಾಲ್ಕು ಪ್ರಕರಣಗಳ ವಿಚಾರಣೆಗೂ ತಡೆ ನೀಡಬೇಕೆಂದು ಮತ್ತೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಹೈಕೋರ್ಟ್ ತಡೆಯಾಜ್ಞೆ ಯಿಂದಾಗಿ ದೂರುದಾರರಾದ ಸಿರಾ ಜುದ್ದಿನ್ ಬಾಷಾ ಮತ್ತು ಬಾಲರಾಜ್ ಅವರಿಗೆ ಹಿನ್ನೆಡೆಯಾದಂತಾಗಿದೆ.

Advertisements
Posted in: State News