ರೈಲು ಡಿಕ್ಕಿ ಹೊಡೆದು ಮಹಿಳೆ ಸಾವು

Posted on April 2, 2011

0


ಮಂಗಳೂರು: ಕಾಸರಗೋಡುವಿನ ಉಪ್ಪಳ ರೈಲ್ವೇ ಗೇಟ್ ಬಳಿ ಬೆಂಗಳೂರಿನ ಯಶವಂತಪುರಕ್ಕೆ ತೆರಳುತ್ತಿದ್ದ ಎಕ್ಸೆಪ್ರೆಸ್ ರೈಲು ಮಹಿಳೆಯೊಬ್ಬರಿಗೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ನಡೆದಿದೆ. ಸ್ಥಳೀಯ ನಿವಾಸಿ ಸುಂದರ ಅವರ ಪತ್ನಿ ಕಲ್ಯಾಣಿ ಎಂಬವರೇ ಮೃತಪಟ್ಟ ಮಹಿಳೆಯಾಗಿದ್ದಾರೆ. ಇವರು ರೈಲ್ವೇ ಹಳಿ ದಾಟುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಪೊಲೀಸರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Advertisements
Posted in: Crime News