ಕ್ರಿಮಿನಾಶಕ ಕುಡಿದು ಸಾವು

Posted on April 2, 2011

0


ಮಂಗಳೂರು: ಮದ್ಯದ ಅಮಲಿನಲ್ಲಿ ಕ್ರಿಮಿನಾಶಕ ಸೇವಿಸಿ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಹಿರಿಯಡ್ಕ ಸಮೀಪದ ಬೆಳ್ಳಂಪಳ್ಳಿ ಮೂರುಬೈಲು ಎಂಬಲ್ಲಿ ಸಂಭವಿಸಿದೆ. ಮೃತರನ್ನು ಸ್ಥಳೀಯ ನಿವಾಸಿ ರಮಾನಂದ ನಾಯಕ ಎಂಬವರ ಪುತ್ರ ಉದಯ ನಾಯಕ (೩೫)ಎಂದು ಗುರುತಿಸಲಾಗಿದೆ. ವಿಪರೀತ ಮದ್ಯ ಸೇವಿಸಿದ್ದ ಇವರು ಇದೇ ಅಮಲಿನಲ್ಲಿ ಮನೆಯಲ್ಲಿ ಇಟ್ಟಿದ್ದ ಕ್ರಿಮಿನಾಶಕವನ್ನು ಕುಡಿದು ಮೃತಪಟ್ಟಿದ್ದಾರೆ ಎಂದು ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ದಾಖಲಿಸಿರುವ ದೂರಿನಲ್ಲಿ ತಿಳಿಸಲಾಗಿದೆ.

Posted in: Crime News