ಪುತ್ತೂರು: ಅತ್ಯಾಚಾರಿಗೆ ಏಳು ವರ್ಷ ಕಠಿಣ ಶಿಕ್ ಷೆ

Posted on April 2, 2011

0


ಪುತ್ತೂರು: ಪುತ್ತೂರು ತಾಲ್ಲೂಕಿನ ಕೊಣಾಲು ಗ್ರಾಮದ ಕೋಲ್ಪೆ ನಿವಾಸಿಯಾದ ದಲಿತ ಸಮುದಾಯಕ್ಕೆ ಸೇರಿದ ಅಪ್ರಾಪ್ತ ಬಾಲಕಿಯೊಬ್ಬಳನ್ನು ವರ್ಷದ ಹಿಂದೆ ಕಾಡಿಗೆ ಕರೆದೊಯ್ದು ಅತ್ಯಾಚಾರವೆಸಗಿ ಕೊಲೆ ಬೆದರಿಕೆಯೊಡ್ಡಿದ ಆರೋಪ ಎದುರಿಸುತ್ತಿದ್ದ ವ್ಯಕ್ತಿಯನ್ನು ಜಿಲ್ಲಾ ಸೆಷನ್ಸ್ ನ್ಯಾಯಾಲಯ ಅಪರಾಧಿ ಎಂದು ತೀರ್ಮಾನಿಸಿ ೭ ವರ್ಷ ಕಠಿಣ ಶಿಕ್ಷೆ ಮತ್ತು ರೂ.೧೦ ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ.

ಪುತ್ತೂರು ತಾಲ್ಲೂಕಿನ ಕೌಕ್ರಾಡಿ ಗ್ರಾಮದ ದೋಂತಿಲ ನಿವಾಸಿ ಇಬ್ರಾಹಿಂ ಎಂಬವರ ಪುತ್ರ ಮಹಮ್ಮದ್ ಇಕ್ಬಾಲ್ (೨೬) ಶಿಕ್ಷೆಗೊಳಗಾದ ಆರೋಪಿ.

ಪುತ್ತೂರು ತಾಲೂಕಿನ ಕೊಣಾಲು ಗ್ರಾಮದ ಕೋಲ್ಪೆ ನಿವಾಸಿಯಾದ ದಲಿತ ಸಮುದಾಯಕ್ಕೆ ಸೇರಿದ ೧೬ರ ಹರೆಯದ ಅಪ್ರಾಪ್ತ ಬಾಲಕಿಯೊಬ್ಬಳು ಕಳೆದ ವರ್ಷ ಜೂನ್ ೨೬ರಂದು ಸಂಜೆ ನೆಲ್ಯಾಡಿ ಪೇಟೆಯಲ್ಲಿ ಮನೆಗೆ ಹೋಗಲೆಂದು ವಾಹನಕ್ಕಾಗಿ ಕಾಯು ತ್ತಿದ್ದಳು. ಆ ವೇಳೆ ಓಮ್ನಿ ಕಾರಿನಲ್ಲಿ ಅಲ್ಲಿಗೆ ಬಂದ ಮಹಮ್ಮದ್ ಇಕ್ಬಾಲ್ ಮನೆಗೆ ಬಿಡು ವುದಾಗಿ ನಂಬಿಸಿ ಆಕೆಯನ್ನು ಕಾರಿನಲ್ಲಿ ಕರೆದುಕೊಂಡು ಹೋಗಿ ಮನೆಗೆ ಬಿಡುವ ಬದಲು ಬಜತ್ತೂರು ಕಡೆಯ ಕಾಡಿಗೆ ಬಲವಂತ ವಾಗಿ ಕರೆಯೊಯ್ದು ಅತ್ಯಾಚಾರವೆಸಗಿ, ಈ ವಿಚಾರವನ್ನು ಬಾಯ್ಬಿಟ್ಟರೆ ಕೊಲೆ ಮಾಡುವುದಾಗಿ ಬೆದರಿಕೆಯೊಡ್ಡಿದ್ದ ಎಂಬ ಆರೋಪವಿತ್ತು.

ಘಟನೆಯ ಕುರಿತು ಬಾಲಕಿ ನೀಡಿದ ದೂರಿನಂತೆ ಉಪ್ಪಿನಂಗಡಿ ಪೊಲೀಸರು ಅತ್ಯಾಚಾರ ಮತ್ತು ದಲಿತ ಮೇಲಿನ ದೌರ್ಜನ್ಯ ಕಾಯ್ಡೆಯಡಿ ಪ್ರಕರಣ ದಾಖಲಿಸಿ ಕೊಂಡಿದ್ದರು. ಆ ವೇಳೆ ಪುತ್ತೂರು ಉಪವಿಭಾಗದ ಪೊಲೀಸ್ ವರಿಷ್ಠಾಧಿಕಾರಿ ಯಾಗಿದ್ದ ಅಮಿತ್ ಸಿಂಗ್ ಅವರು ಪ್ರಕರಣದ ಕುರಿತು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ಕುರಿತು ಅಂತಿಮ ವಿಚಾರಣೆಯನ್ನು ಪೂರ್ಣಗೊಳಿಸಿದ ಎರಡನೇ ಜಿಲ್ಲಾ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಆರ್.ಎಂ.ಶೆಟ್ಟರ್ ಅವರು ಆರೋಪ ಎದು ರಿಸುತ್ತಿದ್ದ ಮಹಮ್ಮದ್ ಇಕ್ಬಾಲ್ ಮೇಲಿನ ಆರೋಪ ಸಾಬೀತಾಗಿರುವುದಾಗಿ ತೀರ್ಮಾನಿಸಿ ಆತನಿಗೆ ೭ ವರ್ಷ ಕಠಿಣ ಸಜೆ ಮತ್ತು ರೂ.೧೦ ಸಾವಿರ ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ದಂಡದ ಮೊತ್ತವನ್ನು ಅತ್ಯಾಚಾರಕ್ಕೊಳಗಾದ ಬಾಲಕಿಗೆ ನೀಡುವಂತೆ ತೀರ್ಪಿನಲ್ಲಿ ಆದೇಶಿಸಲಾಗಿದೆ. ಪ್ರಾಸಿಕ್ಯೂಶನ್ ಪರವಾಗಿ ಪಬ್ಲಿಕ್ ಪ್ರಾಸಿಕ್ಯೂಟರ್ ಸಿ.ವೆಂಕಟರಮಣ ಸ್ವಾಮಿ ವಾದಿಸಿದ್ದರು.

Posted in: Crime News