ಆತ್ಮಹತ್ಯೆ ಯತ್ನ: ಮೃತ್ಯು

Posted on April 6, 2011

0


ಮಂಗಳೂರು: ಬಜ್ಪೆ ಹಾಗೂ ಮೂಲ್ಕಿ ಠಾಣಾ ವ್ಯಾಪ್ತಿಯಲ್ಲಿ ಎರಡು ಪ್ರತ್ಯೇಕ ಘಟನೆಗಳಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಇಬ್ಬರೂ ಮೃತಪಟ್ಟ ಘಟನೆ ಸಂಭವಿಸಿದೆ. ಬಡಗ ಉಳಿಪಾಡಿ ಗ್ರಾಮದ ನಮಿತ (೨೭) ಎಂಬಾಕೆ ತನ್ನ ಮನೆಯಲ್ಲಿ ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಇದರಿಂದ ಖಾಸಗಿ ಆಸ್ಪತ್ರೆಗೆ ದಾಖಲಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಈ ಬಗ್ಗೆ ಬಜ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೂಲ್ಕಿ ಕಾರ್ನಾಡು ಸಮೀಪದ ಅಯ್ಯಪ್ಪ ಮಂದಿರದ ಬಳಿ ಮಧುಕೇಶವ ಆರ್. ಅಕೇರಿ (೧೮) ಎಂಬವರು ಮೈಗೆ ಸೀಮೆ ಎಣ್ಣೆ ಸುರಿದು ಕೊಂಡು ಆತ್ಮಹತ್ಯೆ ಯತ್ನಿಸಿದ್ದರು. ಆದರೆ ಇವರೂ ಕೂಡ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಈ ಬಗ್ಗೆ ಮುಲ್ಕಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisements
Posted in: Crime News