ಪಿ.ಯು. ಮೌಲ್ಯಮಾಪನ ಬಹಿಷ್ಕಾರ ಹಿಂತೆಗೆಯಿರಿ: ಗಣೇ ಶ್ ಕಾರ್ಣಿಕ್ ಮನವಿ

Posted on April 6, 2011

0


ಮಂಗಳೂರು: ದ್ವಿತಿಯ ಪಿಯುಸಿ ಮೌಲ್ಯಮಾಪನ ಬಹಿಷ್ಕಾರದ ಕುರಿತು ಕರೆ ನೀಡಿ ಉಪನ್ಯಾಸಕರಲ್ಲಿ ಗೊಂದಲ ನಿರ್ಮಾಣ ಮಾಡುತ್ತಿರುವುದು ವಿದ್ಯಾರ್ಥಿಗಳ ದೃಷ್ಟಿಯಿಂದ ಸೂಕ್ತವಲ್ಲವೆಂದು ಅನಿವಾಸಿ ಭಾರತೀಯ ಸಮಿತಿಯ ಉಪಾಧ್ಯಕ್ಷರಾದ ಗಣೇಶ್ ಕಾರ್ಣಿಕ್ ತಿಳಿಸಿದ್ದಾರೆ.

ಪದವಿ ಪೂರ್ವ ಕಾಲೇಜು ಉಪನ್ಯಾಸಕರ ಮತ್ತು ಪ್ರಾಂಶುಪಾಲರ ವೇತನ ಪರಿಷ್ಕರಣೆಯ ಬೇಡಿಕೆಯು ಸರ್ಕಾರದ ಪರಿಶೀಲನೆಯ ಹಂತದಲ್ಲಿದ್ದು ಈ ಹಂತದಲ್ಲಿ ಮೌಲ್ಯಮಾಪನಕಕೆ ಬಹಿಷ್ಕಾರ ಹಾಕುವುದು ಸರಿಯಲ್ಲ ಎಂದು ಅವರು ತಿಳಿಸಿದ್ದಾರೆ.

ಈ ಕುರಿತು ಪಿ.ಯು ಒಕ್ಕೂಟ ಸರ್ಕಾರಿ ಪಪೂ ಕಾಲೇಜುಗಳ ಉಪನ್ಯಾಸಕರ ಸಂಘ ಹಾಗೂ ರಾಜ್ಯ ಸೆಕೆಂಡರಿ ಶಿಕ್ಷಕರ ಸಂಘದೊಂದಿಗೆ ವಿಸ್ತೃತ ಚರ್ಚೆ ನಡೆ ಸಿದ್ದು, ಸನ್ಮಾನ್ಯ ಮುಖ್ಯಮಂತ್ರಿಯವರಿಗೆ ಅರ್ಜಿ ಸಲ್ಲಿಸಲಾಗಿದೆ ಎಂದು ಪ್ರತಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಹಂತದಲ್ಲಿ ವಿದ್ಯಾರ್ಥಿಗಳ ಹಾಗೂ ಪೋಷಕರ ಹಿತದೃಷ್ಟಿಯಿಂದ ಪದವಿ ಪೂರ್ವ ಶಿಕ್ಷಣ ಇಲಾಖೆಯ ಕೆಲವು ಉಪನ್ಯಾಸಕರು ತಮ್ಮ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನ ಸೆಳೆಯುವುದಕ್ಕಾಗಿ ಮೌಲ್ಯಮಾಪನ ಬಹಿಷ್ಕರಿಸುವುದಾಗಿ ಕೈಗೊಂಡಿರುವ ನಿರ್ಣಯವನ್ನು ಹಿಂತೆಗೆ ದುಕೊಂಡು ಮೌಲ್ಯಮಾಪನ ಕಾರ್ಯಕ್ಕೆ ಯಾವುದೇ ಅಡ್ಡಿಯುಂಟು ಮಾಡ ಬಾರದೆಂದು ಗಣೇಶ್ ಕಾರ್ಣಿಕ್ ಪತ್ರಿಕಾ ಪ್ರಕಟನೆಯಲ್ಲಿ ವಿನಂತಿಸಿದ್ದಾರೆ.

Advertisements