ಮಕ್ಕಳ ಅಪಹರಣ ಯತ್ನ: ಮೂವರ ಸೆರೆ

Posted on April 7, 2011

0


ಬಂಟ್ವಾಳ: ಸಜೀಪಪಡು, ಕಂಚಿನಡ್ಕ ಪದವು ಎಂಬಲ್ಲಿ ಅಪ್ರಾಪ್ತ ಮಕ್ಕಳಿಬ್ಬರ ಮೇಲೆ ಹಲ್ಲೆ ನಡೆಸಿ ಅಪಹರಿಸಲು ಯತ್ನಿಸಿದ ಆರೋಪದಲ್ಲಿ ಮೂವರನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬುಧವಾರ ಮುಂಜಾನೆ ಬಂಧಿಸಿದ್ದಾರೆ.

ಆರೋಪಿತರನ್ನು ಕೃಷ್ಣಾಪುರ ನಿವಾಸಿಗಳಾದ ಅಬೂಬಕ್ಕರ್ ಸಿದ್ದೀಕ್, ಆಯೀಷಾ ಬಾನು ಯಾನೆ ಆಯಿಷಾ ಹಾಗೂ ಶಾಹುಲ್ ಹಮೀದ್ ಎಂದು ಗುರುತಿಸಲಾಗಿದೆ. ಆರೋಪಿಗಳು ಮಾ.೨ಕ್ಕೆ ಅಬ್ದುಲ್ ರಹಿಮಾನ್ ಎಂಬವರ ಮನೆಗೆ ಅಕ್ರಮವಾಗಿ ನುಗ್ಗಿ ಮಕ್ಕಳಾದ ಅರ್ಫಾನಾ (೧೩) ಹಾಗೂ ಅಬ್ದುಲ್ ಅತೀಫ್ (೯) ಎಂಬವರ ಮೇಲೆ ಹಲ್ಲೆ ನಡೆಸಿ, ಅಪಹರಿಸಲು ಯತ್ನಿಸಿದ್ದರು. ಘಟನೆಗೆ ಸಂಬಂಧಿಸಿ ಮಕ್ಕಳ ಪೋಷಕರು ಪೊಲೀಸರಿಗೆ ದೂರು ನೀಡಿದ್ದು, ಆರೋಪಿಗಳು ತಲೆ ಮರೆಸಿಕೊಂಡಿದ್ದರು.

ಬಾಲ ನ್ಯಾಯ ಕಾಯಿದೆಯನ್ವಯ ಮಕ್ಕಳ ಮೇಲಾದ ದೌರ್ಜನ್ಯವನ್ನು ತನಿಖೆ ನಡೆಸುವಂತೆ ಮಕ್ಕಳ ಪೋಷಕರು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾಯೋಗಕ್ಕೆ ಮನವಿ ಸಲ್ಲಿಸಿದ್ದರು. ಪ್ರಕರಣ ಕೈಗೆತ್ತಿಕೊಂಡ ಆಯೋಗ ತನಿಖೆ ನಡೆಸಿ ವರದಿ ಕೊಡುವಂತೆ ಪೊಲೀಸ್ ಅಧಿಕಾರಿಗಳಿಗೆ ಆದೇಶಿಸಿತ್ತು. ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿದ ಎಸ್.ಐ. ರಫೀಕ್ ತಹಶೀಲ್ದಾರ್ ನೇತೃತ್ವದ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Posted in: Crime News