ತೆರವು ಕಾರ್ಯಾಚರಣೆ ನಿಲ್ಲಿಸಿ: ಕಾಂಗ್ರೆಸ್ ಎಚ್ ಚರಿಕೆ

Posted on April 12, 2011

0


ಪುತ್ತೂರು: ರೈತರ ವಶದಲ್ಲಿರುವ ಕುಮ್ಕಿ ಸಹಿತ ಕಾನ, ಬಾಣೆ ಸೇರಿದಂತೆ ಹೆಚ್ಚುವರಿ ಸರ್ಕಾರಿ ಭೂಮಿಯನ್ನು ಸರ್ಕಾರವು ಕಸಿಯುವ ಹನ್ನಾರ ನಡೆಸು ತ್ತಿದ್ದು, ಈ ಒತ್ತುವರಿ ಭೂಮಿಯ ತೆರವು ಕಾರ್ಯಾಚರಣೆಯನ್ನು ಕಂದಾಯ ಇಲಾಖೆಯ ಅಧಿಕಾರಿಗಳು ತಕ್ಷಣವೇ ಕೈಬಿಡದಿದ್ದಲ್ಲಿ ರೈತರನ್ನು ಸೇರಿಸಿಕೊಂಡು ಪಕ್ಷಾತೀತವಾಗಿ ಜೀವದ ಹಂಗು ತೊರೆದು ಉಗ್ರ ಹೋರಾಟ ನಡೆಸುವುದಾಗಿ ಮತ್ತು ಈ ಸಮಸ್ಯೆಯ ಕುರಿತು ಸ್ಪಂದಿಸದ ಜನಪ್ರತಿನಿಧಿಗಳಿಗೆ ಘೆರಾವ್ ಹಾಕುವುದಾಗಿ ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ ಎಚ್ಚರಿಸಿದ್ದಾರೆ.

ಅವರು ಸೋಮವಾರ ಸುದ್ದಿ ಗೋಷ್ಟಿಯಲ್ಲಿ ಮಾತನಾಡುತ್ತಾ ಅನಾದಿ ಕಾಲದಿಂದಲೂ ರೈತರು ತಮ್ಮ ಜಮೀ ನಿನ ಕುಮ್ಕಿ ಕಾನ ಬಾಣೆ ಸೇರಿದಂತೆ ಹೆಚ್ಚುವರಿ ಸರ್ಕಾರಿ ಜಮೀನನ್ನು ಒತ್ತುವರಿ ಮಾಡಿಕೊಂಡು ಕೃಷಿ ಹಾಗೂ ಇನ್ನಿತರ ಉದ್ದೇಶಗಳಿಗಾಗಿ ಬಳಸಿಕೊಂಡು ಬರುತ್ತಿದ್ದಾರೆ. ಆದರೆ ಇತ್ತೀಚೆಗೆ ಜಿಲ್ಲೆಯಲ್ಲಿ ಇಂತಹ ಒತ್ತುವರಿ ಜಮೀನನ್ನು ಸರ್ಕಾರ ತೆರವು ಗೊಳಿಸುವ ಕೆಲಸಕ್ಕೆ ಮುಂದಾಗಿದೆ. ಕಂದಾಯ ಅಧಿಕಾರಿಗಳು ರೈತರಿಗೆ ನೋಟೀಸು ಜಾರಿಗೊಳಿಸುವ ಮೂಲಕ ಬೆದರಿಕೆ ತಂತ್ರ ಅನುಸರಿಸಿದ್ದಾರೆ. ಇದರಿಂದಾಗಿ ಜಿಲ್ಲೆಯ ರೈತರಿಗೆ ಗೊಂದಲ ಹಾಗೂ ಭೀತಿ ಎದುರಾ ಗಿದೆ ಎಂದು ಅವರು ಆರೋಪಿಸಿದರು.

ಸುದ್ದಿಗೋಷ್ಟಿಯಲ್ಲಿ ಪುರಸಭಾ ಸದಸ್ಯ ಅನ್ವರ್ ಖಾಸಿಂ, ಪುತ್ತೂರು ಬ್ಲಾಕ್ ಇಂಟಕ್ ಅಧ್ಯಕ್ಷ ನೇಮಾಕ್ಷ ಸುವರ್ಣ,ಅರಿಯಡ್ಕ ಗ್ರಾ.ಪಂ. ಉಪಾಧ್ಯಕ್ಷ ಇಕ್ಬಾಲ್ ಹುಸೇನ್ ಮತ್ತು ನರಿಮೊಗರು ಗ್ರಾ.ಪಂ. ಸದಸ್ಯ ಬಾಬು ಶೆಟ್ಟಿ ಉಪಸ್ಥಿತರಿದ್ದರು.

Advertisements