ಬಸ್-ಪಿಕಪ್ ಡಿಕ್ಕಿ: ಒರ್ವ ಮೃತ್ಯು

Posted on April 14, 2011

0


ಮಂಗಳೂರು: ರಾಷ್ಟ್ರೀಯ ಹೆದ್ದಾರಿ ಕಲ್ಲಡ್ಕ ಸಮೀಪದ ಕೃಷ್ಣಕೋಡಿ ಎಂಬಲ್ಲಿ ಖಾಸಗಿ ಬಸ್ ಮತ್ತು ಪಿಕಪ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಒಬ್ಬರು ಮೃತಪಟ್ಟಿದ್ದು, ಇನ್ನೊರ್ವ ಗಾಯಗೊಂಡ ಘಟನೆ ಬುಧವಾರ ನಡೆದಿದೆ.

ಲೊರೆಟ್ಟೊ ಪದವು ನಿವಾಸಿ ಪ್ರಶಾಂತ್ (೨೦) ಮೃತರಾಗಿದ್ದು, ಕೃಷ್ಣಪ್ಪ ಗಾಯಗೊಂಡಿದ್ದಾರೆ. ಡಿಕ್ಕಿಯ ಹೊಡೆತಕ್ಕೆ ಪಿಕಪ್‌ನಲ್ಲಿ ಕುಳಿತ ಪ್ರಯಾಣಿಕರು ಹಿಂಬದಿಯಿಂದ ಹಾರಿ ಬಿದ್ದು ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಮಂಗಳೂರು ಕಡೆಯಿಂದ ಬರುತ್ತಿದ್ದ ಖಾಸಗಿ ಬಸ್ ಉಪ್ಪಿನಂಗಡಿ ಕಡೆಯಿಂದ ಬರುತ್ತಿದ್ದ ಪಿಕಪ್ ಮುಖಾಮುಖಿ ಡಿಕ್ಕಿ ಹೊಡೆಯಿತು ಎನ್ನಲಾಗಿದೆ.

Posted in: Crime News