ಈಶ್ವರಪ್ಪ ಬದಲಾವಣೆಯಿಲ್ಲ: ಯಡಿಯೂರಪ್ಪ

Posted on May 9, 2011

0


ಬೆಂಗಳೂರು: ಬಿಜೆಪಿ ರಾಜ್ಯಾ ಧ್ಯಕ್ಷರ ಬದಲಾವಣೆ ಮಾಡಲಾಗು ವುದಿಲ್ಲ ಎಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸ್ಪಷ್ಟಪಡಿ ಸಿದ್ದಾರೆ.

ಮಾಧ್ಯಮಗಳಲ್ಲಿ ಬಂದಿರುವ ವರದಿಗೆ ಪ್ರತಿಕ್ರಿಯಿಸಿರುವ ಅವರು ಯಾವುದೇ ಕಾರಣಕ್ಕೂ ರಾಜ್ಯಾಧ್ಯಕ್ಷರ ಬದಲಾವಣೆ ಮಾಡುವುದಿಲ್ಲ. ಈಶ್ವರಪ್ಪ ಅವಧಿ ಪೂರೈಸಲಿದ್ದಾರೆ. ಅವರ ಸಾg ಥ್ಯದಲ್ಲಿ ಪಕ್ಷದ ಬಲ ಹೆಚ್ಚಲಿದೆ ಮತ್ತು ಮುಂದಿನ ಚುನಾವಣೆಯಲ್ಲಿ ೧೫೦ ಶಾಸಕರನ್ನು ಗೆಲ್ಲಿಸಿಕೊಡುವ ಸಾಮ ರ್ಥ್ಯ ಈಶ್ವರಪ್ಪ ಅವರಿಗಿದೆ ಎಂದು ಯಡಿಯೂರಪ್ಪ ಅವರು ಹೇಳಿದರು.

ಇದೇ ವೇಳೆ ಸಂಪುಟ ವಿಸ್ತರಣೆ ಬಗ್ಗೆ ಮಾತನಾಡಿದ ಯಡಿಯೂರಪ್ಪ, ವರಿಷ್ಠರ ಜತೆ ಚರ್ಚಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು.

ಮೇ ೧೩ರಂದು ಮೂರು ವಿಧಾನಸಭಾ ಕ್ಷೇತ್ರಗಳ ಚುನಾವಣಾ ಫಲಿತಾಂಶ ಬಂದ ಬಳಿಕ ಈ ಬಗ್ಗೆ ವರಿಷ್ಠರ ಜತೆ ಚರ್ಚಿಸಲಾಗುವುದು ಎಂದರು.

Advertisements
Posted in: Special Report