ಮಾನಸಿಕ ಅಸ್ವಸ್ಥ ಆತ್ಮಹತ್ಯೆ

Posted on May 9, 2011

0


ಮಂಗಳೂರು: ಕಡಬ ಠಾಣಾ ವ್ಯಾಪ್ತಿಯ ಕುಟ್ಟುಪ್ಪಾಡಿ ಎಂಬಲ್ಲಿ ಮಾನಸಿಕ ಅಸ್ವಸ್ಥ ಜನಾರ್ದನ ಗೌಡ(೨೪) ಎಂಬಾತ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ಸಂಭವಿಸಿದೆ. ಈತ ಶನಿವಾರ ನಸುಕಿನಲ್ಲಿ ವಿಷ ಸೇವಿಸಿ ಅಸ್ವಸ್ಥನಾಗಿದ್ದಾತನನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುತ್ತಾನೆ. ಕಡಬ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ರಿಕ್ಷಾ ಪಲ್ಟಿ: ಪ್ರಯಾಣಿಕ ಗಾಯ: ಉಪ್ಪಿನಂಗಡಿ ಬಳಿಯ ಕೂಟೇಲು ಸೇತುವೆ ಸಮೀಪ ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಪರಿಣಾಮ ಪ್ರಯಾಣಿಕ ಗಾಯಗೊಂಡು ಆಸ್ಪತ್ರೆ ಸೇರಿದ ಘಟನೆ ನಿನ್ನೆ ನಡೆದಿದೆ. ಗಾಯಾಳುವನ್ನು ಗೋಳಿತ್ತೊಟ್ಟು ನಿವಾಸಿ ರಾಧಾಕೃಷ್ಣ ಎಂದು ಗುರುತಿಸಲಾಗಿದೆ. ಪುತ್ತೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

AiÀÄĪÀ

Advertisements
Posted in: Special Report