ಕರಾವಳಿಯಲ್ಲಿ ಕಟ್ಟೆಚ್ಚರಕ್ಕೆ ಸೂಚನೆ

Posted on May 12, 2011

0


ಬೆಂಗಳೂರು: ಭಯೋತ್ಪಾದಕ ಒಸಾಮಾ ಬಿನ್ ಲಾಡೆನ್ ಹತ್ಯೆಯ ಬೆನ್ನಲ್ಲೇ ರಾಜ್ಯಾದ್ಯಂತ ಒಂದು ವರ್ಷ ಕಾಲ ಕಟ್ಟೆಚ್ಚರ ವಹಿಸುವಂತೆ ಕೇಂದ್ರ, ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ.

ಜನನಿಬಿಡ ಪ್ರದೇಶ, ವಿದೇಶಿ ಪ್ರವಾಸಿಗರು ತಂಗುವ ಹಾಗೂ ಪ್ರವಾಸಿ ತಾಣಗಳು, ಐಟಿ ಕಂಪೆನಿಗಳ ನೆಲೆ, ಕರಾವಳಿ ಪ್ರದೇಶ ಸೇರಿದಂತೆ ಸೂಕ್ಷ್ಮ ಪ್ರದೇಶಗಳಲ್ಲಿ ಕಟ್ಟೆಚ್ಚರ ಹಾಗೂ ಭದ್ರತೆ ಒದಗಿಸಲು ಸೂಚಿಸಿದೆ ಎಂದು ಗೃಹ ಸಚಿವ ಆರ್.ಅಶೋಕ್ ತಿಳಿಸಿದರು.

ಈ ಹಿನ್ನೆಲೆಯಲ್ಲಿ ನಿನ್ನೆ ಉನ್ನತ ಮಟ್ಟದ ಪೋಲೀಸ್ ಅಧಿಕಾರಿಗಳ ಸಭೆ ನಡೆಸಿ ಆಂತರಿಕ ಭದ್ರತೆ ಬಗ್ಗೆ ಪರಿ ಶೀಲಿಸಿ, ಆದೇಶಿಸಿರುವುದಲ್ಲದೆ, ಹಿರಿಯ ಪೊಲೀಸ್ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಬಿಡಾರ ಹೂಡುವುದನ್ನು ಬಿಟ್ಟು ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳಲು ಸೂಚನೆ ನೀಡಲಾಗಿದೆ. ಲಾಡೆನ್ ಹತ್ಯೆಯ ಹಿನ್ನೆಲೆಯಲ್ಲಿ ಅಲ್ ಖೈದಾ ಉಗ್ರಗಾಮಿಗಳು ಅಮೇರಿಕ ಹಾಗೂ ಇಂಗ್ಲೆಂಡ್ ಮೇಲೆ ದಾಳಿ ನಡೆಸುವ ಸಾಧ್ಯತೆಗಳು ಹೆಚ್ಚಿರುವುದರಿಂದ ಹೆಚ್ಚಿನ

Advertisements
Posted in: State News