ಟ್ಯಾಂಕರ್ ಡಿಕ್ಕಿ: ಮೃತ್ಯು

Posted on May 12, 2011

0


ಮಂಗಳೂರು: ರಸ್ತೆಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ದಂಪತಿ ಪಾದಚಾರಿಗಳಿಗೆ ಬುಲೆಟ್ ಗ್ಯಾಸ್ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ವಾಗಿ ಪತಿ ಮೃತಪಟ್ಟು ಪತ್ನಿ ಆಸ್ಪತ್ರೆಯಲ್ಲಿ ದಾಖಲಾಗಿರುವ ಘಟನೆ ಬುಧವಾರ ಬೆಳಿಗ್ಗೆ ಸೋಮೇಶ್ವರ ಪಂಚಾಯತ್ ವ್ಯಾಪ್ತಿಯ ಸಂಕೊಳಿಗೆ ಎಂಬಲ್ಲಿ ಸಂಭವಿಸಿದೆ.

ಸ್ಥಳೀಯ ನಿವಾಸಿ ಉಮರಬ್ಬ(೬೫) ಮೃತಪಟ್ಟವರು. ಇವರು ಪತ್ನಿ ಫಾತಿಮಾ(೫೫) ಎಂಬವರೊಂದಿಗೆ ಸಂಕೊಳಿಗೆ ರಸ್ತೆ ಬದಿಯಲ್ಲಿ ನಡೆದು ಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಮಂಗಳೂರಿನಿಂದ ತಲಪಾಡಿ ಕಡೆಗೆ ತೆರಳುತ್ತಿದ್ದ ಬುಲೆಟ್ ಗ್ಯಾಸ್ ಟ್ಯಾಂಕರ್ ಚಾಲಕ ಜೀಪನ್ನು ಓವರ್‌ಟೇಕ್ ಮಾಡುವ ಭರದಲ್ಲಿ ಅತಿವೇಗ ಹಾಗೂ ಅಜಾಗರೂಕತೆ ಚಾಲನೆ ನಡೆಸಿ ಪಾದಚಾರಿಗಳಿಗೆ ಡಿಕ್ಕಿ ಹೊಡೆದಿದ್ದಾನೆ.

ಘಟನೆಯಿಂದ ತಲೆ, ಕೈ ಹಾಗೂ ಕಾಲುಗಳಿಗೆ ಗಂಭೀರ ಗಾಯಗೊಂಡ ಉಮರಬ್ಬರನ್ನು ತೊಕ್ಕೊಟ್ಟು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು. ಎಡಕೈ ಮೂಳೆಮುರಿತಕ್ಕೊಳಗಾಗಿರುವ ಫಾತಿಮಾ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಟ್ಯಾಂಕರ್ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ.

Advertisements
Posted in: Local News